9:09 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ: ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ; ಸಭೆ ನಿಗದಿ ಮಾಡಲು ಆಯುಕ್ತರಿಗೆ ಸೂಚನೆ

22/07/2026, 23:06

ಮಂಗಳೂರು(reporterkarnataka.com): ನಗರದಲ್ಲಿ ಅನೇಕ ವರ್ಷಗಳಿಂದ ಪುರಭವನದ ಬಳಿ ವಾರದ ರಜಾದಿನದ ವ್ಯಾಪಾರ ನಡೆಯುತ್ತಿದ್ದ ಸಂಡೆ ಬಜಾರ್ ವ್ಯಾಪಾರಸ್ಥರನ್ನು ಮಹಾನಗರ ಪಾಲಿಕೆ ತೆರವುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಡೆ ಬಜಾರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘವು ಮನವಿ ನೀಡಿತ್ತು.

ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಇಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರತಿನಿಧಿಗಳ ಸಭೆ ನಡೆಸಿ ಸಂಡೆ ಬಜಾರ್ ವ್ಯಾಪಾರಸ್ಥರ ಅಹವಾಲು ಆಲಿಸಿ, ಸಂಡೆ ಬಜಾರ್ ವಾರದ ಒಂದು ದಿನಕ್ಕೆ ಸೀಮಿತವಾಗಿರುವ ವ್ಯಾಪಾರಕ್ಕೆ ಕಠಿಣ ಕ್ರಮಗಳು ಬೇಕಾಗಿಲ್ಲ ವ್ಯಾಪಾರಸ್ಥರಲ್ಲಿ ಲೋಪದೋಷಗಳಿದ್ದರೆ ಪರಿಹರಿಸಲು ಕ್ರಮ ಕೈಗೊಳ್ಳದೆ ನಿರ್ದಾಕ್ಷಿಣ್ಯ ಕ್ರಮದ ಅಗತ್ಯ ಇಲ್ಲ ಎಂದು ನಗರಪಾಲಿಕೆ ಆಯುಕ್ತರಿಗೆ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ದೂರವಾಣಿ ಮೂಲಕ ಸೂಚನೆ ನೀಡಿ ಕೂಡಲೇ ಈ ಬಗ್ಗೆ ಸಚಿವರ ಸಮ್ಮುಖದಲ್ಲಿ ಸಭೆ ನಿಗದಿಗೊಳಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಪ್ರಮುಖರಾದ ಸಂತೋಷ್ ಆರ್.ಎಸ್, ಹಂಝ ಮೊಹಮ್ಮದ್, ಎಂ.ಎನ್ ಶಿವಪ್ಪ, ವಿಜಯ್ ಜೈನ್, ಪಕೀರ ನಾಯ್ಕ್, ಸಿಕಂದರ್ ಬೇಗ್, ಮುತ್ತುರಾಜ್, ಗದಿಗಪ್ಪ, ಶಿವಾನಂದ, ಅಬ್ದುಲ್ ಕಾದರ್ ವಾಮಂಜೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು