4:25 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್

23/11/2024, 19:29

ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದು ನಮ್ಮ ಹಿನ್ನಡೆಗೆ ಕಾರಣವಾಗಿದೆ. ಚನ್ನಪಟ್ಟಣ ದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರ ಅದೃಷ್ಟ ಚೆನ್ನಾಗಿಲ್ಲ. ಎರಡು ಬಾರಿ ಸೋತಿದ್ದಾರೆ. ಇಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಗೆಲ್ಲಲಿಲ್ಲ ಎಂದರು.
ನಮಗೆ ಎರಡು ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಮತದಾರರು ನಾನಾ ಕಾರಣಗಳಿಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕೂಡ ಭರತ್ ಬೊಮ್ಮಾಯಿ ಅವರನ್ನು ನಿಲ್ಲಿಸಲು ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿರಲಿಲ್ಲ. ನನ್ನಲ್ಲೇ ಈ ವಿಚಾರವನ್ನು ಹೇಳಿದ್ದರು. ಆದರೆ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಒಪ್ಪಿಕೊಂಡಿದ್ದರು ಎಂದು ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು