ಇತ್ತೀಚಿನ ಸುದ್ದಿ
ಉಪ್ಪಿನಕೋಟೆ ವಿಶಾಲ ಗಾಣಿಗ ಬರ್ಬರ ಕೊಲೆ ಪ್ರಕರಣ: ಪತಿಯೇ ಹಂತಕನೇ? ಪೊಲೀಸ್ ತನಿಖೆ ಏನು ಹೇಳುತ್ತಿದೆ?
20/07/2021, 08:07

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಗೃಹಿಣಿಯ ಕೊಲೆ ಪ್ರಕರಣದಲ್ಲಿ ಆಕೆಯ ಪತಿಯೇ ಭಾಗಿಯಾಗಿರುವ ಕುರಿತು ಪೊಲೀಸ್ ಇಲಾಖೆಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.
ವಿಶಾಲಾ ಅವರ ಪತಿ ರಾಮಕೃಷ್ಣ ಗಾಣಿಗ ಅವರು ದುಬೈನಲ್ಲಿದ್ದುಕೊಂಡೇ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದಾರೆ. ಬಾಡಿಗೆ ಹಂತಕರಿಗೆ ಸುಪಾರಿ ನೀಡಿ ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ.
ಗುಜ್ಜಾಡಿ ನಾಯಕವಾಡಿಯ ನಿವಾಸಿ ವಾಸು ಗಾಣಿಗರ ಪುತ್ರಿ ವಿಶಾಲ ಗಾಣಿಗ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗೀಡಾಗಿದ್ದರು.
ಹೊರ ರಾಜ್ಯದಲ್ಲಿ ಅಡಗಿ ಕುಳಿತ್ತಿದ್ದ ಇಬ್ಬರು ಹಂತಕರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ತಂಡ ರಚಿಸಲಾಗಿತ್ತು. ರಾಮಕೃಷ್ಣ ಗಾಣಿಗನೇ ಕೊಲೆಗೆ ಸುಪಾರಿ ನೀಡಿರುವುದಾಗಿ ಹಂತಕರೇ ತಿಳಿಸಿದ್ದಾರೆ ಎನ್ನಲಾಗುತ್ತಿದೆ.