3:50 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು

13/03/2023, 17:48

ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಮರ ತುಂಡರಿಸುವ ಕೆಲಸ ಮೇಲೆ ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದರು. ಆಗ ಬಾಲಕಿ ಹಾಗೂ ಆಕೆಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು