2:21 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು: ಮಂಜೂರಾತಿ ನೀಡಲು ಮುಜರಾಯಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

13/06/2023, 15:56

ಪುತ್ತೂರು(reporterkarnataka.com): ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ತೆರಳಿ ಸಚಿವರ ಜೊತೆ ಮಾತುಕತೆ ನಡೆಸಿದ ಶಾಸಕರು ಈ ಮನವಿಯನ್ನು ನೀಡಿದ್ದಾರೆ.
ಈ ದೆವಸ್ಥಾನವು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು, ಪ್ರವರ್ಗ ಎ ಸೇರಿದ ಅಧೀಸೂಚಿತ ಸಂಸ್ಥೆಯಾಗಿರುತ್ತದೆ. ಪ್ರಸಿದ್ದಿಯನ್ನು ಹೊಂದಿರುವ ಈ ದೇವಸ್ಥಾನಕ್ಕೆ ಊರು ಹಾಗೂ ಪರವೂರುಗಳಿಂದ್ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು ಅವರಿಗೆ ತಂಗಲು ವಸತಿ,ಮೂಲಸೌಕರ್ಯಗಳು, ಸೇರಿದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ಕೊರತೆಯಿದೆ. ಈ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಪ್ರಭಾತ್ ಪೈ ಎಂಬವರಿಗೆ ಸೇರಿದ ಸರ್ವೆ ನಂಬ ೧-೨೦ ೦.೩೨ ಎಕ್ರೆ ಜಾಗವಿದ್ದು ಈ ಜಾಗವನ್ನು ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಲು ದೇವಸ್ಥಾನದ ಆಡಳಿತ ಮಂಡಳಿ ಊರಿನ ಸಮಸ್ತ ಭಕ್ತಾದಿಗಳು ಸೇರಿ ಒಂದು ಮೊತ್ತವನ್ನು ನಿಗಧಿಮಾಡಿರುತ್ತರೆ. ಈ ಮೊತ್ತಕ್ಕೆ ಜಾಗ ನೀಡುವುದಾಗಿ ಜಾಗದ ಮಾಲಕರು ಒಪ್ಪಿಗೆಯನ್ನು ನೀಡಿರುತ್ತಾರೆ. ಜಾಗ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಜಾಗದ ದಾಖಲೆ, ದರಪಟ್ಟಿ ಕುರಿತ ಸಂಪೂರ್ಣ ಮಾಹಿತಿಯನ್ನು ಸೂಕ್ತ ವರದಿಯೊಂದಿಗೆ ಇಲಾಖಾ ಅನುಮತಿಗಾಗಿ ಸಲ್ಲಿಸಿದ್ದಾರೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರುಭಾಗದ ಈಶಾನ್ಯ ದಿಕ್ಕಿನಲ್ಲಿರುವ ಜಾಗವನ್ನು ಖರೀದಿಸಲು ಇಲಾಖೆ ಅನುವು ಮಾಡಿಕೊಡಬೇಕೆಂದು ಶಾಸಕರು ಸಚಿವರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಶಾಸಕರು ಮನವಿಯನ್ನು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು