11:50 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ

19/09/2021, 09:45

ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ.

ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.20 ಗಂಟೆಯ ಸುಮಾರಿಗೆ ಮಡಿಕಲ್ ಕರ್ಕಿಕಳಿಯ ಪ್ರದೇಶದಲ್ಲಿ ಉಪ್ಪುಂದ ನದಿಕಂಠದ ನಿವಾಸಿ ಅಣ್ಣಪ್ಪ ಮೊಗವೀರ (45) ಇಬ್ಬರ ಮೃತದೇಹ ಪತ್ತೆಯಾಗಿದೆ.

ಬೈಂದೂರು ತಾಲೂಕು ಪಡುವರಿ ಗ್ರಾಮದ ತಾರಾಪತಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿ ಮರಳಿ ಅಳ್ವೆಕೋಡಿಗೆ ಬರುತ್ತಿದ್ದ ನಾಡಾದೋಣಿ ಸೆ.  17ರ ಸಂಜೆ ಮಗುಚಿ ಬಿದ್ದು ದುರಂತ ಸಂಭವಿಸಿತ್ತು. 

ದೋಣಿಯಲ್ಲಿದ್ದ ಇತರೆ ನಾಲ್ಕೈದು ಮೀನುಗಾರರು ಬೇರೆ ನಾಡದೋಣಿ ಸಹಾಯದಿಂದ ದಡ ಸೇರಿದ್ದಾರೆ. ದುರಂತ ಸಂಭವಿಸಿದಾಗ ಅವರು ಜೈ ಗುರೂಜಿ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ, ಮೀನುಗಾರಿಕೆ ಮುಗಿಸಿ ಬರುತಿದ್ದ ದೋಣಿಗೆ ತೆರೆ ಬಡಿದ ಪರಿಣಾಮ ಇಬ್ಬರು ಮೀನುಗಾರರು ಮೃತರಾಗಿದ್ದಾರೆ. ಒಬ್ಬ ಎಳೆಯ ವಯಸ್ಕ, ಮತ್ತೊಬ್ಬ ಮಧ್ಯ ವಯಸ್ಕ, ಆ ಇಬ್ಬರು ಮನೆಯವರ ಮುಖ ನೋಡುವಾಗ ಅಪಾರ ನೋವು ಉಂಟಾಯಿತು.

ಮೀನುಗಾರರ ಸಮಸ್ಯೆಯ ಕುರಿತಂತೆ ಮೊನ್ನೆಯಷ್ಟೆ ಮೀನುಗಾರಿಕೆಯ ಸಚಿವರ ನೇತೃತ್ವದಲ್ಲಿ ಚರ್ಚಿಸಲಾಗಿದೆ. ವಿವಿಧ ಕಾಮಗಾರಿಗಳು, ಅಭಿವೃದ್ಧಿ, ಮೀನುಗಾರರ ಸಮಸ್ಯೆಯ ಕುರಿತಂತೆ ಶೀಘ್ರದಲ್ಲೇ ಕರಾವಳಿಯ ಶಾಸಕರೊಂದಿಗೆ ಮತ್ತು ಸಚಿವರೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಿದ್ದೇವೆ. ಮೀನುಗಾರಿಕೆ ನಿದೇರ್ಶಕರೊಂದಿಗೆ ಮಾತನಾಡಿದ್ದೇನೆ. ಬೈಂದೂರು ಕ್ಷೇತ್ರಕ್ಕೆ ಮೂರು ಸಾವಿರ ಜೀವ ರಕ್ಷಕ ಜಾಕೇಟ್‌ಗಳನ್ನು ಒದಗಿಸುವಂತೆ ಕೋರಲಾಗಿದೆ. ಮೃತರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರ ದೊರಕಲಿದೆ. ಹಾಗೇ ನಮ್ಮ ಶಾಸಕರ ನಿಧಿಯಲ್ಲಿ ಪರಿಹಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ಪವನ್ ನಾಯ್ಕ್, ಗಂಗೊಳ್ಳಿ ಕರಾವಳಿ ಪೊಲೀಸ್ ಕಾವಲು ಪಡೆಯ ಎಸೈ ವಿಜಯ ಅಮೀನ್ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೃತದೇಹ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು