4:37 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್

13/02/2023, 13:16

ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನು‌ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ‌ಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು