5:43 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ, ಬಹುಮುಖ ಪ್ರತಿಭೆಯ ರವೀಂದ್ರನಾಥ ಶೆಟ್ಟಿ ನಿಧನ

23/05/2021, 21:19

ಮಂಗಳೂರು(reporterkarnataka news): ನಗರದ ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಭಾನುವಾರ ನಿಧನರಾದರು.

ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ಎರಡು ದಶಕಗಳಿಂದ ಅಧ್ಯಾಪಕರಾಗಿದ್ದರು. ಎಂಎ, ಎಂಫಿಲ್ ಪದವೀಧರರಾಗಿದ್ದು, ಎನ್‌ಸಿಸಿ ಅಧಿಕಾರಿಯೂ ಆಗಿದ್ದರು. ಎನ್‌ಸಿಸಿಯ ಸಾಧನೆಗಾಗಿ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 

ಹವ್ಯಾಸಿ ಯಕ್ಷಗಾನ ಮತ್ತು ರಂಗಭೂಮಿ ಕಲಾವಿದರಾಗಿದ್ದ ಅವರು, ಉತ್ತಮ‌ ಕಾರ್ಯಕ್ರಮ‌‌ ನಿರ್ವಾಹಕರೂ ಆಗಿ ಜನಮೆಚ್ಚುಗೆ ಗಳಿಸಿದ್ದರು.

ಪತ್ನಿ ದಿವ್ಯಾ, ಮೂರು ವರ್ಷದ ಮಗು ಸೇರಿದಂತೆ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ರವೀಂದ್ರನಾಥ ಅವರ ಅಗಲುವಿಕೆಗೆ ಕೆನರಾ ಪ್ರೌಢ ಶಾಲೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿ ಬಳಗ ತೀವ್ರ ಕಂಬನಿ ಮಿಡಿದಿದೆ. ವಿದ್ಯಾರ್ಥಿಗಳಿಗೆ ಅವರು ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು