7:56 PM Thursday22 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಉರ್ವ ಜೋಡಿ ಕೊಲೆ ಪ್ರಕರಣ: 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ

22/01/2026, 19:51

ಮಂಗಳೂರು(reporterkarnataka.com): ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸರು ಆಂಧ್ರ ಪ್ರದೇಶದಲ್ಲಿ ದಂಡುಪಾಳ್ಯ ಗ್ಯಾಂಗ್ ನ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ (55) ಎಂದು ಗುರುತಿಸಲಾಗಿದೆ.
ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ಉರ್ವ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

*ಹಿಂದಿನ ಪ್ರಕರಣದ ವಿವರ:*
ದಿನಾಂಕ: 11-10-1997 ರಂದು ಮಧ್ಯಾರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ 1) ದೊಡ್ಡ ಹನುಮ @ ಹನುಮ 2)ವೆಂಕಟೇಶ @ ಚಂದ್ರ 3) ಮುನಿಕೃಷ್ಣ @ ಕೃಷ್ಣ ಮತ್ತು 4) ನಲ್ಲತಿಮ್ಮ @ ತಿಮ್ಮ5). ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ 6) ಚಿಕ್ಕ ಹನುಮ 7) ಕೃಷ್ಣಾಡು @ ಕೃಷ್ಣ 8) ವೆಂಕಟೇಶ್ @ ರಮೇಶ್ ಇವರುಗಳು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ( 80) ಹಾಗೂ ರಂಜಿತ್ ವೇಗಸ್ (19) ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೊಚಿ ಪರಾರಿಯಾಗಿದ್ದರು.
ಪತ್ತೆ ಕಾರ್ಯಾಚರಣೆಯಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಮ್ , ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ಅವರು ಭಾಗಿಯಾಗಿದ್ದರು. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಂಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ&ಐಜಿಪಿ ರವರಿಗೆ ಶಿಫಾರಸ್ಸು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು