7:56 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು