ಇತ್ತೀಚಿನ ಸುದ್ದಿ
ಪ್ರವೀಣ್ ಹತ್ಯೆ ಪ್ರಕರಣ; ಕೊಲೆಗಡುಕರ ಬಂಧನಕ್ಕೆ ಪ್ರತಿಪಕ್ಷದ ಉಪ ನಾಯಕ ಖಾದರ್ ಒತ್ತಾಯ
27/07/2022, 11:38

ಮಂಗಳೂರು(reportey.com):
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕರ ಶೀಘ್ರ ಬಂಧನ ಮಾಡುವಂತೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಸಮಾಜ ಘಾತುಕ ಶಕ್ತಿಗಳು ಹಾಗೂ ಕೊಲೆಗಡುಕರಿಗೆ ಇತ್ತೀಚೆಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ’ ಎಂದು ಖಾದರ್ ಹೇಳಿದರು.
ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರ’ ಎಂದು ಅವರು ನುಡಿದರು.
ನಿನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣವನ್ನು ಖಂಡಿಸಿ ಮಾತನಾಡಿದ ಅವರು ‘ಗೂಂಡಾಗಳಿಗೆ, ಕೊಲೆಗಡುಕರಿಗೆ ಸರಕಾರ ಮತ್ತು ಕಾನೂನಿನ ಭಯವಿಲ್ಲ ಎಂದು ಇದರಿಂದ ಸಾಬೀತಾಗಿದೆ. ಈ ಹಿಂದೆ ಆದ ಘಟನೆಯನ್ನು ಸೂಕ್ಷ್ಮತೆಯನ್ನು ಅರಿತುಕೊಂಡು ಮುಂಜಾಗ್ರತೆ ಮಾಡುವ ಜವಾಬ್ದಾರಿ ಸರಕಾರ ಮತ್ತು ಪೊಲೀಸ್ ಇಲಾಖೆಯದ್ದು. ಈ ಎಲ್ಲಾ ಘಟನೆಗಳನ್ನು ಭೇದಿಸುವುದರ ಮೂಲಕ ನೈಜ ಅಪರಾಧಿಗಳನ್ನು ಆದಷ್ಟು ಬೇಗನೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿಯೂ ಸರಕಾರ ಮೃತ ಮಶೂದ್ ಮತ್ತು ಪ್ರವೀಣ್ ರವರ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕೆಂದು ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.
ಎಲ್ಲಾ ಜಾತಿ ,ಮತ, ವರ್ಗದವರು ಒಂದಾಗಿ ಯಾರೇ ಸಮಾಜ ಘಾತುಕ ಶಕ್ತಿಗಳು,ಕೊಲೆಗಡುಕರು ಆಗಲಿ ಅವರ ವಿರುದ್ಧ ಹೋರಾಡಲು ಒಟ್ಟಾಗಿ ಮುಂದಾಗಬೇಕು ಮತ್ತು ಇಂತಹ ಕೃತ್ಯ ನಡೆಸಿದವರನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಮಾಜದಲ್ಲಿ ಒಟ್ಟಾಗಿ ಒಂದಾಗಿ ಸಂಪೂರ್ಣ ಸಹಕಾರ ಕೊಡಬೇಕೆಂದು ಖಾದರ್ ಮನವಿ ಮಾಡಿದರು.