7:15 PM Monday15 - September 2025
ಬ್ರೇಕಿಂಗ್ ನ್ಯೂಸ್
ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ

ಇತ್ತೀಚಿನ ಸುದ್ದಿ

ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ

24/09/2022, 17:12

ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ

19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ.

ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಯುವತಿ ಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಯುವತಿಯ ಹತ್ಯೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿತು ಹಿನ್ನೆಲೆಯಲ್ಲಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್  ಸಿಂಗ್ ಧಾಮಿ ರೆಸಾರ್ಟ್ ಧ್ವಂಸಕ್ಕೆ ಆದೇಶ ನೀಡಿದ್ದರು. ಮುಖ್ಯಮಂತ್ರಿ 

ಆದೇಶದ ಮೇರೆ ರೆಸಾರ್ಟ್ ಅನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ” ಎಂದು ಮುಖ್ಯಮಂತ್ರಿಯ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂಬ ಮೂವರು ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಹದಿಹರೆಯದವರ ಹತ್ಯೆಯ ಆರೋಪದ ನಂತರ ರಾಜ್ಯದ ಎಲ್ಲಾ ರೆಸಾರ್ಟ್‌ಗಳಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ. ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.

ಕಠಿಣ ಶಿಕ್ಷೆ: ಅಕ್ರಮವಾಗಿ ನಡೆಸುತ್ತಿರುವ ರೆಸಾರ್ಟ್‌ಗಳ ವಿರುದ್ಧ ಹಾಗೂ ಅತ್ಯಾಚಾರಿ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಧಾಮಿ ಭರವಸೆ ನಿಡಿದ್ದಾರೆ. “ಇದು ದುರದೃಷ್ಟಕರ. ಪೊಲೀಸರು ಕೆಲಸ ಮಾಡುತ್ತಿದ್ದಾರೆ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಹ ಘೋರ ಅಪರಾಧ ಸಾಬೀತಾದರೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಅಪರಾಧಿ ಯಾರೇ ಆಗಿರಲಿ ಅವರಿಗೆ ಶಿಕ್ಷೆ ಖಂಡಿತ “ಎಂದು ಅವರು ಭರವಸೆ ನೀಡಿದ್ದಾರೆ.

”ಬಾಲಕಿಯ ಹತ್ಯೆಯ ನಂತರ, ಅಪರಾಧಿಗಳಲ್ಲಿ ಭಯ ಹುಟ್ಟಿಸಲು ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ನಾನು ತಕ್ಷಣವೇ ಹೇಳಿದ್ದೇನೆ” ಎಂದು ಯಮಕೇಶ್ವರ ಶಾಸಕ ರೇಣು ಬಿಷ್ತ್ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ಆದೇಶಿಸಿದ ಸಿಎಂಗೆ ಹಾಗೂ ಸಂತ್ರಸ್ತೆಯ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಂದಾಯ ಪೊಲೀಸ್ ಉಪನಿರೀಕ್ಷಕರನ್ನು ಅಮಾನತುಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

ಪುಲ್ಕಿತ್ ಆರ್ಯ ಹರಿದ್ವಾರದ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರ. ವಿನೋದ್ ಆರ್ಯ ಅವರು ಈ ಹಿಂದೆ ಉತ್ತರಾಖಂಡದ ಮತಿ ಕಲಾ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಸಚಿವ ಶ್ರೇಣಿಯನ್ನು ಹೊಂದಿದ್ದರು. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯನ್ನು ಹತ್ಯೆಗೈದ ಆರೋಪದ ಮೇಲೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ. ಸೆಪ್ಟೆಂಬರ್ 18 ರಂದು ಬಾಲಕಿ ಕಾಣೆಯಾಗಿದ್ದಳು. ಆರೋಪಿಗಳು ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಂದೆ ಆರೋಪಿಸಿದ್ದು, ಘಟನೆಯ ಆಡಿಯೋವನ್ನು ರೆಕಾರ್ಡ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು