3:37 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 12:33

ಬೆಳಗಾವಿ(reporterkarnataka.com): ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನ ಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ. ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.
*ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ* ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು