4:27 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

13/12/2024, 21:27

ಬೆಳಗಾವಿ (reporterkarnataka.com): ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು.
ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಐತಿಹಾಸಿಕ ಪ್ರಸಿದ್ಧ ದೇವಾಲಯಗಳಿದ್ದು ಇಲ್ಲಿ ಟೆಂಪಲ್ ಟೂರಿಸಮ್ ಅಭಿವೃದ್ಧಿ ಪಡಿಸಬಹುದು ಅಲ್ಲದೆ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳಿದ್ದು ಅವುಗಳ ಹಿನ್ನೀರಿನಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಬಹುದಾಗಿದೆ. ಕರಡಿಧಾಮ, ಪಕ್ಷಿಧಾಮ ಗಳಿದ್ದು , ರೋಪ್ ವೇ ಮೂಲಕ ಆಕರ್ಷಿಸಬಹುದಾದ ಸ್ಥಳಗಳಿದ್ದು,ರಸ್ತೆ, ರೈಲು ಮಾತ್ತು ವಾಯು ಮಾರ್ಗದ ವ್ಯವಸ್ಥೆಯಿದ್ದು ಇವೆಲ್ಲವುಗಳನ್ನು ಬಳಸಿಕೊಂಡು ಈ ಭಾಗವನ್ನು ಅಭಿವೃದ್ಧಿಗೊಳಿಸಬೇಕು ಎಂದರು.
ಸದಸ್ಯ ಎಂ. ನಾಗರಾಜ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆ ಗಳ ಸ್ಥಾಪನೆ ಆಗಬೇಕು, ನೀರಾವರಿ ಸಮಸ್ಯೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಬಗೆಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸದಸ್ಯರಾದ ಡಿ.ಟಿ.ಶ್ರೀನಿವಾಸ್ , ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು