ಇತ್ತೀಚಿನ ಸುದ್ದಿ
ಉತ್ತರ ಕರ್ನಾಟಕ ಪ್ರವಾಹ ಪರಿಸ್ಥಿತಿ ಎದುರಿಸಲು ಸರಕಾರದಿಂದ ಸಕಲ ಕ್ರಮ: ಸಚಿವ ಶ್ರೀಮಂತ ಪಾಟೀಲ್
20/06/2021, 07:41
ರಾಹುಲ್ ಅಥಣಿ ಬೆಳಗಾವಿ
Ifo.reporterkarnataka@gmail.com
ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸರಕಾರ ಸಿದ್ಧವಾಗಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಹೇಳಿದರು
ಇಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವರು, ಮುಂಜಾಗ್ರತಾ ಕ್ರಮವಾಗಿ ಬೋಟ್ ವ್ಯವಸ್ಥೆ, ಲೈಫ್ ಸೇವಿಂಗ್ ಜಾಕೆಟ್, ಸಂತ್ರಸ್ತರಿಗೆ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಇದಕ್ಕಾಗಿ ಒಬ್ಬರು ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವರು ನುಡಿದರು.
ನೆರೆಯ ಮಹಾರಾಷ್ಟ್ರದಲ್ಲಿ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕರ್ನಾಟಕದ ಹಲವು ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ನಿವಾಸಿಗಳು ಎಚ್ಚರದಿಂದ ಇರಬೇಕು ಎಂದು ಕಾಗವಾಡ ಶಾಸಕರೂ ಆಗಿರುವ ಪಾಟೀಲ ಹೇಳಿದರು.