7:23 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕ ಪ್ರವಾಹ ಪರಿಸ್ಥಿತಿ ಎದುರಿಸಲು  ಸರಕಾರದಿಂದ ಸಕಲ ಕ್ರಮ: ಸಚಿವ ಶ್ರೀಮಂತ ಪಾಟೀಲ್

20/06/2021, 07:41

ರಾಹುಲ್ ಅಥಣಿ ಬೆಳಗಾವಿ

Ifo.reporterkarnataka@gmail.com

ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸರಕಾರ ಸಿದ್ಧವಾಗಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ಹೇಳಿದರು

ಇಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವರು, ಮುಂಜಾಗ್ರತಾ ಕ್ರಮವಾಗಿ ಬೋಟ್ ವ್ಯವಸ್ಥೆ, ಲೈಫ್ ಸೇವಿಂಗ್ ಜಾಕೆಟ್, ಸಂತ್ರಸ್ತರಿಗೆ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಇದಕ್ಕಾಗಿ ಒಬ್ಬರು ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವರು ನುಡಿದರು.

ನೆರೆಯ ಮಹಾರಾಷ್ಟ್ರದಲ್ಲಿ ಸತತವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕರ್ನಾಟಕದ ಹಲವು ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ನಿವಾಸಿಗಳು ಎಚ್ಚರದಿಂದ ಇರಬೇಕು ಎಂದು ಕಾಗವಾಡ  ಶಾಸಕರೂ ಆಗಿರುವ ಪಾಟೀಲ  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು