2:30 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕೆ ಕೇಂದ್ರ ಸ್ಥಾಪನೆ: ಯಾದಗಿರಿಯಲ್ಲಿ 2531 ಕೋಟಿ ಹೂಡಿಕೆ

09/07/2021, 08:50

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka news): ರಾಜ್ಯದಲ್ಲಿ ಏಕರೂಪದ ಅಭಿವೃದ್ಧಿ‌ಯನ್ನು ಸಾಧಿಸಲು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಕೈಗಾರಿಕಾ ಕೇಂದ್ರ‌ಗಳನ್ನು ಆರಂಭಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ‌ಗಳಲ್ಲಿ ಕೈಗಾರಿಕಾ ಹಬ್‌ಗಳನ್ನು ಸ್ಥಾಪಿಸಲಾಗುವುದು. ಇದರಿಂದಾಗಿ ವಿವಿಧ ವಲಯಗಳಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯವಾಗಲಿದೆ.ಯಾದಗಿರಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1000 ಎಕರೆ ಭೂಮಿಯಲ್ಲಿ ಔಷಧೀಯ ಕ್ಲಸ್ಟರ್ ಸ್ಥಾಪನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಒಟ್ಟು 62 ಕಂಪೆನಿಗಳಿಗೆ 2531 ಕೋಟಿ ರೂ. ಹೂಡಿಕೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

5000 ಕೋಟಿ ಹೂಡಿಕೆಯ ಕೊಪ್ಪಳ‌ದಲ್ಲಿ‌ನ ಆಟಿಕೆ ಕ್ಲಸ್ಟರ್ ದೇಶೀಯ ಮಾರುಕಟ್ಟೆ ಜೊತೆಗೆ ವಿದೇಶಿ ಮಾರುಕಟ್ಟೆ‌ಗಳಿಗೂ ಆಟಿಕೆಗಳನ್ನು ರವಾನಿಸಲಿದೆ. ಇದರಿಂದ ಸುಮಾರು 10 ಸಾವಿರಗಳಷ್ಟು ಉದ್ಯೋಗ ಸೃಷ್ಟಿ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು ಹೊರತುಪಡಿಸಿ ಎರಡು ಮತ್ತು ಮೂರನೇ ಶ್ರೇಣಿಯ ನಗರಗಳಲ್ಲಿ‌ಯೂ ಕೈಗಾರಿಕೆಗಳನ್ನು ಆರಂಭಿಸುವುದು.ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು