8:18 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದ ದುಸ್ಥಿತಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಎದುರಾಗಲಿದೆ: ಸಿ.ಎಂ. ಇಬ್ರಾಹಿಂ ಭವಿಷ್ಯ

12/03/2022, 12:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಪಂಚ ರಾಜ್ಯ ಚುನಾವಣೆಯಲ್ಲಿ ನಾನು ಮೊದಲ ಹೇಳಿದಂತೆ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ನೆಲಕಚ್ಚಿದೆ , 73 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಹೀನಾಯ ಪರಿಸ್ಥಿತಿ ಬಂದಿರಲಿಲ್ಲ. 

ಕರ್ನಾಟಕದಲ್ಲೂ ಸಹ ಕಾಂಗ್ರೆಸ್‌ಗೆ ಮುಂದಿನ ವಿಧಾನಸಭಾ ಇಂತಹ ದುಸ್ಥಿತಿ ಚುನಾವಣೆಯಲ್ಲಿ ಬಂದದೊಗಲಿದೆಯೆಂದು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಎಂ. ಇಬ್ರಾಹಿಂ ಹೇಳಿದರು.

ಅವರು ನಗರ ಹೊರ ವಲಯದ ಎಪಿಎಂಸಿ ಮಾರುಕಟ್ಟೆ ಬಳಿಯಿರುವ ಅಂಜುಮಾನ್ ಕಮಿಟಿ ಉಪಾಧ್ಯಕ್ಷ ಮುಸ್ತಫಾರವರ ಎಂ. ಕೆ. ಟ್ರಾಕ್ಟರ್ ಶೋ ರೂಂಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಅವರು ಉತ್ಕರಿಸಿದರು.

ಪ್ರಿಯಾಂಕ ವಾರ್ದಾರವರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಂಬ ಬೆಳೆಯನ್ನು ಬೆಳೆದರೂ ಬೆಳೆ ಕೊಯ್ಯುಯುವುದಕ್ಕೆ ಯಾವ ಕಾಂಗ್ರೆಸ್ ಕಾರ್ಯಕರ್ತರು ನೆರವಿಗೆ ಬರಲಿಲ್ಲ . ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಎರಡು ಸೀಟುಗಳನ್ನು ಗೆಲ್ಲುವ ಹೀನಾಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆಯೆಂದು ಅಭಿಪ್ರಾಯ ಪಟ್ಟರು. ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಸ್ವಯಂಕೃತ ಅಪರಾಧದಿಂದ ಹಿಂದೆ ನಡೆದ ಚುನಾವಣೆಗಿಂತ ಈಗಿನ ಚುನಾವಣೆಯಲ್ಲಿ 73 ಸೀಟುಗಳನ್ನು ಕಳೆದುಕೊಂಡಿದೆ . 

ಕರ್ನಾಟಕದಲ್ಲೂ ಸಹ ಕಾಂಗ್ರೆಸ್‌ಗೆ ಮುಂದಿನ ವಿಧಾನಸಭಾ ಇಂತಹ ದುಸ್ಥಿತಿ ಚುನಾವಣೆಯಲ್ಲಿ ಬಂದದೊಗಲಿದೆಯೆಂದು ಭವಿಷ್ಯ ನುಡಿದರು. 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಸವತತ್ವ ಸರ್ಕಾರ ಕರ್ನಾಟಕದಲ್ಲಿ ಬರಲಿದ್ದು , ಬಿಜೆಪಿ ಎರಡನೇ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗಲಿದ್ದು , ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ಬಣ್ಣಿಸಿದರಲ್ಲದೆ , ಹಿಂದೆ ಕೋಲಾರ ಲೋಕ ಸಭಾ ಚುನಾವಣೆ ನಡೆದಾಗ ಕೆ. ಎಚ್. ಮುನಿಯಪ್ಪರವರನ್ನು ಕಾಂಗ್ರೆಸ್ ಪಕ್ಷದ ಶಾಸಕರೇ ಸೋಲಿಸಿದರು , ಮುನಿಯಪ್ಪರವರ ಪರವಾಗಿ ನಾನು ಚುನಾವಣೆ ಪ್ರಚಾರಕ್ಕೆ ಬಂದಿದ್ದೆ ಎಂದರು .

ಮೇಕೆದಾಟು ಯೋಜನೆಯ ಪಾದಯಾತ್ರೆ ಸಂಪೂರ್ಣ ವಿಫಲವಾಗಿದ್ದು , ಇದಕ್ಕೆ ರಾಜ್ಯದ ಜನಬೆಂಬಲ ಪಕ್ಷಕ್ಕೆ ದೊರೆತಿರುವುದಿಲ್ಲ . ನಾನು ಹಿಂದೆ ಬಳ್ಳಾರಿ ಪಾದಯಾತ್ರೆ ಮಾಡಿದ್ದಾಗ ಜನ ಬೆಂಬಲ ದೊರೆತು ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬ೦ದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆಂದು ವಿವರಿಸಿದರು . ನಾನು ಯಾವ ಪಕ್ಷಕ್ಕೆ ಹೋಗುತ್ತೇನೆಂದು ನಾಳೆ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ , ನಂತರ ಬೆಂಗಳೂರಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆಂದು ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು