2:50 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ವಿಧಿವಶ

21/08/2021, 23:21

ಲಕ್ನೋ(reporterkarnataka.com):
ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್  ಸಿಂಗ್ (89)  ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್ (ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದು ಚಿಕಿತ್ಸೆಗಾಗಿ ಸೇರಿಸಲಾಗಿತ್ತು.

ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಅವರು ಇಂದು ಇಹಲೋಕ ತ್ಯಜಿಸಿದರು.

ಕಲ್ಯಾಣ್ ಸಿಂಗ್ ನಿಧನಕ್ಕೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು