6:46 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ 

02/06/2022, 10:32

ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಗಳಿಗೆ ಅವಕಾಶವಿದೆ. ಆದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮಾದರಿಯನ್ನು ಬಿಟ್ಟು ಬೇರೆ ದಾರಿ ಹಿಡಿದಿದೆ. ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಹತಾಶವಾಗಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಕೃತ್ಯ ನಡೆಸುತ್ತಿದೆ. ಅವರದ್ದೇ ಶಾಸಕರಾದ ಅಖಂಡ ಶ್ರೀನುವಾಸ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಅವರದ್ದೇ ನಾಯಕನಾದ ಸಂಪತ್ ಭಾಗಿಯಾಗಿದ್ದಾರೆ ಎಂದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಪ್ರತಿಭಟನೆ ಹಲವು ಮಾರ್ಗಗಳಿವೆ. ಆದರೆ ಕಾಂಗ್ರೆಸ್ ಮತ್ತು ಎನ್ ಎಸ್ ಯುಐ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಬಟ್ಟೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಪೊಲೀಸರ ಸಕಾಲಿಕ ಮಧ್ಯ ಪ್ರವೇಶದಿಂದ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಕುರಿತು ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು