5:19 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು