ಇತ್ತೀಚಿನ ಸುದ್ದಿ
ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ ಬಂಧನ; ಕಾಂಗ್ರೆಸ್ ನಿಂದ ಠಾಣೆಗೆ ಮುತ್ತಿಗೆ
04/06/2021, 18:25
ಮಂಗಳೂರು(reporterkarnataka news): ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಪೊಲೀಸರು ಬಂಧಿಸಿದ್ದು, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ನಿಂದ ಕಂಕನಾಡಿ ಠಾಣೆಗೆ ಮುತ್ತಿಗೆ ಹಾಕಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂದಕ್ ವಿರುದ್ಧ ಎಫ್ ಐಆರ್ ದಾಖಲಾದ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.