7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವೈದ್ಯರ ಮೇಲೆ ಮಹಿಳೆಯಿಂದ ಚಪ್ಪಲಿಯಿಂದ ಹಲ್ಲೆ: ಓಪಿಡಿ ಬಂದ್ ಮಾಡಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ

10/09/2024, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆಕ್ರೋಶಗೊಂಡಿರುವ ಆರೋಗ್ಯ ಸಿಬ್ಬಂದಿಗಳು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮೂಳೆ ತಜ್ಞ ಡಾ. ವೆಂಕಟೇಶ್ ಎಂಬವರ ಮೇಲೆ ಮಹಿಳೆ ಏಕಾಏಕಿ ಹಲ್ಲೆ‌ ನಡೆಸಿದ್ದಾರೆ.

ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.
ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆದಿದೆ.
ರೋಗಿ ಅಕ್ಕನಿಗೆ ವೈದ್ಯರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಕ್ಕೆ ರೋಗಿ ಅಕ್ಕನಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು