ಇತ್ತೀಚಿನ ಸುದ್ದಿ
ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ: ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ
28/04/2022, 10:47
ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು.
ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವ ವಿ.ಸೋಮಣ್ಣ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಕೋವಿಡ್ 4ನೇ ಅಲೆ ಹರಡದಂತೆ ತಡೆಗಟ್ಟುವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2ನೇ ಡೋಸ್ ಪಡೆಯದವರನ್ನ ಪತ್ತೆ ಹಚ್ಚಿ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ತೀವ್ರಗೊಳಿಸಿ. ಆಕ್ಸಿಜನ್ ,ವೈದ್ಯರ ಕೊರತೆ ಆಗದಂತೆ ನೋಡಿಕೊಳ್ಳಿ.. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾ ಇರಲಿ. ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ ಎಂದು ಸೂಚಿಸಿದ್ದಾರೆ.