8:43 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

22/11/2024, 19:39

ತುಮಕೂರು(reporterkarnataka.com): ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನ ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ, ಮನುಷ್ಯ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.
ಹೇಳಿಕೊಳ್ಳೋಕೆ ವಿದ್ಯಾವಂತರು. ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು