8:14 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

ಇತ್ತೀಚಿನ ಸುದ್ದಿ

ವಳಚ್ಚಿಲ್‌ ಶ್ರೀನಿವಾಸ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ವ್ರತಾಚರಣೆ: ಲಕ್ಷ ಪುಷ್ಪಾರ್ಚನೆ

30/12/2025, 18:19

ಮಂಗಳೂರು(reporterkarnataka.com): ಶ್ರೀನಿವಾಸ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಗರದ ಹೊರವಲಯದ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವ್ರತಾಚರಣೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಬೆಳಿಗ್ಗೆ 8.45ರಿಂದ 9.00ರವರೆಗೆ ನಿತ್ಯ ಪೂಜೆ ನೆರವೇರಿಸಲಾಯಿತ್ತಲ್ಲದೆ, ಭಜನಾ ಸೇವೆ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶ್ರೀನಿವಾಸ ದೇವರಿಗೆ ಲಕ್ಷ ಪುಷ್ಪಾರ್ಚನೆ ಭಕ್ತಿಭಾವದಿಂದ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.



ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್, ಗೌರವಾನ್ವಿತ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಇಆರ್. ಶ್ರೀಮತಿ ಮಿತ್ರಾ ಎಸ್. ರಾವ್, ಶ್ರೀನಿವಾಸ ವಿವಿಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದ ಪುಣ್ಯಫಲವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಶ್ರೀನಿವಾಸ ದೇವಸ್ಥಾನ ವೈಕುಂಠದ ಆಡಳಿತ ಮಂಡಳಿಯವರು ಯಶಸ್ವಿಯಾಗಿ ಆಯೋಜಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು