8:22 PM Saturday21 - December 2024
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್…

ಇತ್ತೀಚಿನ ಸುದ್ದಿ

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

19/12/2024, 10:07

ಬೆಳಗಾವಿ ಸುವರ್ಣಸೌಧ (reporterkarnataka.com):
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿದರು.


ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿವರವಾಗಿ ಉತ್ತರ ನೀಡಿದ್ದಾರೆ. 1954ರಲ್ಲಿ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರ ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ. ಸುಮಾರು 17,969 ಎಕರೆ ವಕ್ಫ್ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು