ಇತ್ತೀಚಿನ ಸುದ್ದಿ
ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು
19/07/2023, 17:23

ಮಂಗಳೂರು(reporterkarnataka.com): ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.
ಬುಧವಾರ ಬೆಳಗ್ಗೆ ಕಾಲೇಜಿಗೆ ಹೋಗುವಾಗ ಬೈಕ್ ಡಿವೈಡರ್ ಗೆ ಬಡಿದು ಯುವಕ ಹಾಗೂ ಬೈಕ್ ಮೇಲಕ್ಕೆ ಎಸೆಯಲ್ಪಟ್ಟಿದ್ದು, ಈ ದೃಶ್ಯ ರಸ್ತೆ ಬದಿ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅತೀ ವೇಗ ಅಪಘಾತಕ್ಕೆ ಕಾರಣವಾಗಿದೆ.
ಅಪಘಾತದಲ್ಲಿ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು, ತಲೆ ಛಿದ್ರಗೊಂಡು, ಆತ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.