11:09 AM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ

28/10/2022, 20:17

ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಲಯ ಒಂದರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾ ಗಳು ಹಳದಿ ಹಾಗೂ ಕಪ್ಪು, ವಲಯ ಎರಡರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾಗಳು (ಎಲೆಕ್ಟ್ರಿಕಲ್, ಸಿ ಎನ್ ಜಿ ಹಾಗೂ ಡೀಸೆಲ್, ಪೆಟ್ರೋಲ್ ) ಕಡ್ಡಾಯವಾಗಿ ಹಸಿರು ಹಾಗೂ ಹಳದಿ ಬಣ್ಣವನ್ನು ಹಾಕಿಸಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಇಲ್ಲ, ಬಣ್ಣ ಹಾಕಿಸಿಕೊಳ್ಳಲು ಅಗತ್ಯವಾದ ಕಾಲಾವಕಾಶ ನೀಡಲಾಗುವುದು, ಈ ಮೂಲಕ ಆಟೋ ರಿಕ್ಷಾಗಳು ತಮ್ಮ ವ್ಯಾಪ್ತಿಯನ್ನು ನಿರ್ಧರಿಸಿಕೊಳ್ಳಲು ಅನುಕೂಲವಾಗಲಿದೆ, ಆ ಮೂಲಕ ಗೊಂದಲಗಳಿಗೆ ತೆರೆ ಎಳೆಯಬಹುದಾಗಿದೆ ಎಂದು ಹೇಳಿದರು.ಆರೋಗ್ಯಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುವ ಆಟೋ ರಿಕ್ಷಾಗಳು ಮಾತ್ರ ತಮ್ಮ ವ್ಯಾಪ್ತಿಯನ್ನು ಮೀರಬಹುದಾಗಿದೆ, ಇಂತಹ ಸಂದರ್ಭಗಳಲ್ಲಿ ಅಗತ್ಯ ದಾಖಲಾತಿ ಇಟ್ಟುಕೊಳ್ಳಬೇಕು, ಅದನ್ನ ಹೊರತು ಪಡಿಸಿ ತಮ್ಮ ರಹದಾರಿಯ ವ್ಯಾಪ್ತಿ ಮೀರಿದರೆ, ಸಂಬಂಧಿಸಿದ ಪ್ರಾಧಿಕಾರದವರು ಕ್ರಮಕೈಗೊಳ್ಳುವರು, ಒಂದೊಮ್ಮೆ ಇಂಧನ ಅಥವಾ ಎಲ್ ಪಿ ಜಿ ಭರಿಸಿಕೊಂಡು ಹಿಂತಿರುಗುವಾಗ ದಂಡ ವಿಧಿಸಿದ್ದಲ್ಲಿ ಆ ಬಗ್ಗೆ ಪಟ್ಟಿ ಒದಗಿಸುವಂತೆ ಅವರು ತಿಳಿಸಿದರು.


ಆಟೋ ರಿಕ್ಷಾ ದರ ಪರಿಷ್ಕರಣಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಆಟೋರಿಕ್ಷಾ ಸಂಘದವರು ಹಾಗೂ ಜಿಲ್ಲಾಡಳಿತ ನಡುವೆ ಸಹಮತ ಬರದಿರುವ ಕಾರಣ ಮುಂದಿನ ಸಭೆಯಲ್ಲಿ ದರ ಪರಿಷ್ಕರಣೆಯ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಸಂಚಾರಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ರಿಕ್ಷಾ ಚಾಲಕ-ಮಾಲಕರ ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಅಬುಬಕರ್ ಸುರತ್ಕಲ್, ಗೌರವಾಧ್ಯಕ್ಷ ವಿಷ್ಣುಮೂರ್ತಿ, ಕಾರ್ಯದರ್ಶಿ ಭರತ್ ಕುಮಾರ್, ಸಲಹೆಗಾರರಾದ ಮೊಹಮ್ಮದ್ ಇರ್ಫಾನ್, ಅರುಣ್ ಕುಮಾರ್ ಸೇರಿದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು