ಇತ್ತೀಚಿನ ಸುದ್ದಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ; ಪೊಲೀಸರಿಂದ ಲಾಠಿಚಾರ್ಜ್, ಬಂಧನ
18/07/2024, 21:11
ಬೆಂಗಳೂರು(reporterkarnataka.com): ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರ ನೇತೃತ್ವದಲ್ಲಿ ಇಂದು ‘ವಿಧಾನಸೌಧಕ್ಕೆ ಮುತ್ತಿಗೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ತಡೆದ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನು ಬಂಧಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಈ ಸಂಬಂಧ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.