ಇತ್ತೀಚಿನ ಸುದ್ದಿ
ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಅವ್ಯವಹಾರ ಆರೋಪ: ಕೊನೆಗೂ ಸಚಿವ ನಾಗೇಂದ್ರ ರಾಜೀನಾಮೆ
06/06/2024, 21:09

ಬೆಂಗಳೂರು(reporterkarnataka.com): ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಸಂಪುಟದ ವಿಕೆಟ್ ವೊಂದು ಪತನವಾಗಿದೆ.
`ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಜಮೀರ್ ಅಹ್ಮದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.