ಇತ್ತೀಚಿನ ಸುದ್ದಿ
ನ. 12ರಂದು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ‘ದೀಪಾವಳಿ ಸಂಭ್ರಮ- 2023’
10/11/2023, 18:06

ಮಂಗಳೂರು(reporter Karnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ನಗರದ ಹೊರವಲಯದ ವಾಮಂಜೂರಿನ ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ- 2023 ನವೆಂಬರ್ 12ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ. ಸುದೀಪ್ ಪೌಲ್, ಪ್ರಗತಿಪರ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಡಾ. ವಸಂತ ಕುಮಾರ್, ನಿವೃತ್ತ ಪ್ರಿನ್ಸಿಪಾಲ್ ಡಾ. ಎನ್. ಇಸ್ಮಾಯಿಲ್, ಮಂಗಳಜ್ಯೋತಿ ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ ಭಾಗವಹಿಸುವರು. ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.