6:01 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ: ಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯದ ಬಗ್ಗೆ 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

22/02/2024, 19:54

ಮಂಗಳೂರು(reporterkarnataka.com): ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಮತ್ತು ಸುರಕ್ಷಿತ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳಲ್ಲಿ ಪ್ರಾಂಶುಪಾಲರು/ಮುಖ್ಯಸ್ಥರು ಮತ್ತು ವಿದ್ಯಾರ್ಥಿ ಸಮೂಹದ ಪ್ರತಿನಿಧಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಬೇಕು, ಸಮಿತಿಯ ವತಿಯಿಂದ ಪ್ರತಿ ತಿಂಗಳು ಸಭೆಯನ್ನು ನಡೆಸಬೇಕು ಮತ್ತು ಸಭೆಯ ನಡವಳಿ ಮತ್ತು ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಆಯಾ ತಿಂಗಳಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸಮಿತಿಯ ಆರೋಗ್ಯ ಇಲಾಖೆ ವತಿಯಿಂದ ಹೊರಡಿಸಿರುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಹೊರಡಿಸಲಾಗಿರುವ ಸುತ್ತೋಲೆ ಅಂಶಗಳನ್ನು ಆಯಾ ಸಂಸ್ಥೆಯಲ್ಲಿ ರಚಿಸಲಾಗಿರುವ ಸಮಿತಿಯು ಚಾಚು ತಪ್ಪದೇ ಪಾಲಿಸುತ್ತಿರುವ ಬಗ್ಗೆ ಸಂಸ್ಥೆಯ ಮುಖ್ಯಸ್ಥರು ಅಫಿಧಾವಿತ್ ಮಾಡಿ ಮೂರು ದಿನಗಳೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಗೆ ಸಲ್ಲಿಸಬೇಕು.
ಅಪಿಧಾವಿತ್‍ನಲ್ಲಿ ಆಯಾ ಶಿಕ್ಷಣ ಸಂಸ್ಥೆಯ ವಸತಿ ನಿಲಯಗಳಲ್ಲಿ ಪ್ರತಿದಿನ ಮತ್ತು ಪ್ರತಿವಾರ ಪರಿಶೀಲನೆ ಕೈಗೊಳ್ಳುವ ಸಂಬಂಧ ಕ್ರಿಯಾ ಯೋಜನೆ ತಯಾರಿಸಿ ಸಮಿತಿ ರಚಿಸಿ ನಿರಂತರ ಮೇಲ್ವಿಚಾರಣೆಯನ್ನು ಮಾಡುತ್ತಿರುವ ಕುರಿತು ಕಡ್ಡಾಯವಾಗಿ ನಮೂದಿಸಬೇಕು. ಆರೋಗ್ಯ ಇಲಾಖೆಯ ಎಲ್ಲಾ ವಸತಿ ನಿಲಯಗಳನ್ನು ಪರಿಶೀಲಿಸಲು ಒಂದು ಪರಿಶೀಲನಾ ತಂಡವನ್ನು ರಚಿಸಬೇಕು. ತಂಡಗಳಲ್ಲಿ ನಸಿರ್ಂಗ್ ಸಂಸ್ಥೆಯ ಪ್ರತಿನಿಧಿಗಳು ಸಾರ್ವಜನಿಕ ಪ್ರತಿನಿಧಿಗಳು ಇರುವಂತೆ ಖಾತ್ರಿಪಡಿಸಿಕೊಳ್ಳಬೇಕು ಮತ್ತು ಪ್ರತಿ ತಿಂಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು. ಅಫಿಧಾವಿತ್‍ನಲ್ಲಿ ತಿಳಿಸಿರುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಅಪಿಧಾವಿತ್ ಉಲ್ಲಂಘನೆ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ಹಾಸ್ಟೆಲ್‍ಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡುಬಂದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಮೂಹಿಕ ರೋಗಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು