10:42 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

26/01/2026, 20:50

* *ಯೋಜನೆಯಿಂದ ರೈತರಿಗೆ ಅನುಕೂಲ*

* *ಸೇಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿದ್ದು ಖುಷಿ‌ಕೊಟ್ಟಿತು*

ಉಡುಪಿ(reporterkarnataka.com): ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ‌ ಎಂದರು.
ವಾರಾಹಿ ನೀರಾವರಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರ ಕಚ್ಚಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಇದು ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ.‌ ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಹೇಳಿದರು.

*ಪರಶುರಾಮ ಕರಾವಳಿಗರ ಆರಾಧ್ಯದೈವ:* ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದರು.

* *ಡಿಸಿ ಕೇಸರಿ ಧ್ಚಜ ಹಾರಿಸಿದ ವಿಚಾರ: ಇಲ್ಲಿಗೆ ಬಿಟ್ಟು ಬಿಡಿ*

ಉಡುಪಿ ಪರ್ಯಾಯ ವೇಳೆ ಜಿಲ್ಲಾಧಿಕಾರಿ ಭಗವಾಧ್ವಜ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಉಡುಪಿಯ ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಸಂಸ್ಕೃತಿ ಧಾರ್ಮಿಕತೆಗೆ ಉಡುಪಿ ಹೆಸರುವಾಸಿ. ಈ ವಿಚಾರ ನನಗೆ ಗೊತ್ತಿದೆ. ದ್ವಜ ಹಾರಿಸಿದ ವಿಚಾರ ಅಲ್ಲಿಗೆ ಬಿಟ್ಟುಬಿಡಿ ಎಂದು ಸಚಿವರು ತಿಳಿಸಿದರು.

* *ಐಕ್ಯತೆಯ ದೃಷ್ಟಿಯಿಂದ ದ್ವೇಷ ಭಾಷಣ ಕಾನೂನು:* ದ್ವೇಷ ಭಾಷಣ ಕಾನೂನು ಜಾರಿಗೂ ಮುನ್ನ ನೋಟಿಸ್ ನೀಡಿರುವುದರ ಬಗ್ಗೆ ಮಾತನಾಡಿದ ಸಚಿವರು, ಈಗ ಕಾಂಗ್ರೆಸ್ ಸರ್ಕಾರ ಇದೆ. ದ್ವೇಷ ಭಾಷಣ ವಿರುದ್ಧ ಕಾನೂನು ರೀತಿಯಲ್ಲಿ ಮಸೂದೆ ತಂದಿದ್ದೇವೆ. ಭವಿಷ್ಯದಲ್ಲಿ ಯಾವತ್ತಾದರೂ ಬಿಜೆಪಿ ಸರ್ಕಾರ ಬರಬಹುದು. ಅವರು ನಮ್ಮ ವಿರುದ್ಧವೂ ಇದನ್ನು ಬಳಕೆ ಮಾಡಬಹುದು. ದೇಶದ ಐಕ್ಯತೆ ಸಮಗ್ರತೆ ಒಂದೇ ದ್ವೇಷ ಭಾಷಣ ಮಸೂದೆಯ ಉದ್ದೇಶ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಜನರು ಒಟ್ಟಿಗೆ ಇರಬೇಕಾದರೆ ಜಾತಿ, ಸ್ಥಳ, ಭಾಷೆ, ವ್ಯಕ್ತಿತ್ವಗಳನ್ನು ನಿಂದಿಸಬಾರದು. ಈ ಕಾರಣಕ್ಕೆ ಸಂವಿಧಾನದ ಆಶಯದಂತೆ ಮಸೂದೆ ತಂದಿದ್ದೇವೆ. ಬಿಜೆಪಿಯವರು ಏನಾದರೂ ಹೇಳಲಿ, ದೇಶದ ಸಂವಿಧಾನಕ್ಕೆ ಧಕ್ಕೆ ಬರಬಾರದು ಎಂಬುದು ಮಾತ್ರ ನಮ್ಮ ಉದ್ದೇಶ, ಕಾಂಗ್ರೆಸಿನವರು ಯಾರಾದರೂ ದ್ವೇಷ ಭಾಷಣ ಮಾಡಿದರೆ ಕಾಂಗ್ರೆಸ್ ನವರ ಮೇಲೂ ಕಾನೂನು ಜಾರಿಯಾಗುತ್ತದೆ ಎಂದರು.

* *ಸ್ಟೇಂಟ್ ಮೇರಿಸ್ ದ್ವೀಪದಲ್ಲಿ ಬಾವುಟ ಹಾರಿಸಿದ್ದು ಹೊಸ ಅನುಭವ:*
ಇಂದು ಸೇಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ್ದು ಖುಷಿ ನೀಡಿತು. ‌ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ದ್ವೀಪದಲ್ಲಿ ಧ್ವಜಾರೋಹಣ ಮಾಡಿದೆ. ಇದು ರೋಮಾಂಚಕ ಅನುಭವ, ಇದ ನನ್ನ ಭಾಗ್ಯ‌ ಕೂಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು