10:02 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ವಾರಣಾಸಿ: 4 ದಿನಗಳ ಯುವ 20 ಶೃಂಗಸಭೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ

18/08/2023, 20:15

ವಾರಣಾಸಿ(reporterkarnataka.com): ಯುವ 20 ಶೃಂಗಸಭೆ -2023 ಅನ್ನು ವಾರಣಾಸಿಯ ರುದ್ರಾಕ್ಷ ಅಂತಾರಾಷ್ಟ್ರೀಯ ಸಹಕಾರ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಶುಕ್ರವಾರ ಉದ್ಘಾಟಿಸಿದರು.
ವಾರಣಾಸಿಯಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ವೈ20 ಶೃಂಗಸಭೆಯ ಎರಡನೇ ದಿನವಾದ ಇಂದು ಔಪಚಾರಿಕ ಉದ್ಘಾಟನೆ ನಡೆಸಲಾಯಿತು. ಯುವ 20 (Y20) ಶೃಂಗಸಭೆಯನ್ನು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಭಾರತದ G20 ಪ್ರೆಸಿಡೆನ್ಸಿಯ ಚೌಕಟ್ಟಿನ ಅಡಿಯಲ್ಲಿ ಆಯೋಜಿಸಿದೆ. Y20 ಶೃಂಗಸಭೆಯು ಗುವಾಹಟಿಯಲ್ಲಿ ಆರಂಭದ ಸಭೆ, ಲೇಹ್, ಲಡಾಖ್‌ನಲ್ಲಿ ನಡೆದ ಪೂರ್ವ ಶೃಂಗಸಭೆ ಮತ್ತು ದೇಶಾದ್ಯಂತ ನಡೆಸಿದ ವಿವಿಧ ಜನ ಭಾಗಿದರಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸಭೆಗಳ ಭವ್ಯ ರೂಪವಾಗಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ G20 ದೇಶಗಳು, ಅತಿಥಿ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸುಮಾರು 125 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು