11:31 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ವರುಣ: ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್; ಗ್ರಾಮ ಪ್ರವೇಶಿಸದಂತೆ ತಡೆ

08/03/2024, 18:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಲಾಗಿದೆ.
ಗ್ರಾಮದ ಒಳಗೆ ಪ್ರವೇಶಿಸದಂತೆ ಗ್ರಾಮಸ್ಥರು ತಡೆದಿದ್ದಾರೆ.
ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಯತೀಂದ್ರ ಅವರಿಗೆ ಮುಜುಗರ ಉಂಟಾಗಿದೆ.
ಡಾ ಯತೀಂದ್ರರನ್ನು ಎಳೆದಾಡಿದ ಗ್ರಾಮಸ್ಥರು ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.


ಪೊಲೀಸರ ಮಾತಿಗೂ ಬಗ್ಗದ ಗ್ರಾಮಸ್ಥರು , ಯತೀಂದ್ರ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಗರಂ ಆಗಿರುವ ಗ್ರಾಮಸ್ಥರು, ಹಲವು ಬಾರಿ ಯತೀಂದ್ರ ಭೇಟಿಗೆ ಪ್ರಯತ್ನ ಮಾಡಿದ್ರು ಎನ್ನಲಾಗಿದೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ.
ಇದೇ ವಿಚಾರಕ್ಕೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದೇ ವಿಚಾರಕ್ಕೆ ಘೇರಾವ್ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು