5:22 AM Saturday5 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ವಾರ್ಡನ್ ನಿರ್ಲಕ್ಷ್ಯ: ಮೊರಾರ್ಜಿ ದೇಸಾಯಿ ವಸತಿ ನಿಲಯದ ಆಹಾರದಲ್ಲಿ ದೋಷ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

06/07/2024, 18:53

ವಿರೂಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಸಂಗಪೂರ ರಸ್ತೆಯಲ್ಲಿನ ರಾಜಲಬಂಡಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆಹಾರದಲ್ಲಿನ ವ್ಯತ್ಯಯದಿಂದಾಗಿ 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪಟ್ಟಣದಲ್ಲಿನ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತಾಲೂಕಿನ ರಾಜಲಬಂಡ ಗ್ರಾಮಕ್ಕೆ ಮಂಜೂರಾದ ಮೊರಾರ್ಜಿ ದೇಸಾಯಿ ವಸತಿ ನಿಲಯವು ಕಟ್ಟಡದ ಕೊರತೆಯಿಂದಾಗಿ ಪಟ್ಟಣದಲ್ಲಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ 199ಕ್ಕೂ ಹೆಚ್ಚು ಬಾಲಕ, ಬಾಲಕಿಯರು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಲ್ಲಿನ ನೀರನ್ನು ಶುದ್ದೀಕರಿಸುವುದಕ್ಕಾಗಿ ನೀರಿನ ಟ್ಯಾಂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಲೋರಿನ್ ಪುಡಿಯನ್ನು ಬೆರೆಸಿದ್ದು ಅಂತಹ ನೀರನ್ನು ಶುಕ್ರವಾರ ರಾತ್ರಿ ಸಮಯದ ಊಟವನ್ನು ಅಡುಗೆಯವರು ಸಿದ್ದಪಡಿಸುವಾಗ ಅನ್ನ ಮಾಡುವುದಕ್ಕೆ ಬಳಕೆ ಮಾಡಿರುವುದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಹೊಟ್ಟೆನೋವಿನ ಲಕ್ಷಣಗಳು ಕಂಡುಬಂದಿದೆ. ಕೂಡಲೇ ವಸತಿ ನಿಲಯದ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದರೆ.


ತಾಲೂಕು ಅರೋಗ್ಯಧಿಕಾರಿ ಡಾ.ಶರಣಬಸವರಾಜ ಮಾತನಾಡಿ ಪಟ್ಟಣದಲ್ಲಿನ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಸತಿ ನಿಲಯದ 29 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ದಾಖಲಿಸಿಕೊಂಡು ಅಗತ್ಯವಾದ ಎಲ್ಲಾ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳ ಅರೋಗ್ಯ ಪರೀಕ್ಷೆಯನ್ನು ವೈದ್ಯರ ತಂಡದಿಂದ ನಡೆಸಲಾಗುತ್ತಿದ್ದು ಅಗತ್ಯವಿದವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಅಹಾರದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ.̺ ಸಮವಸ್ತ್ರ ಮಕ್ಕಳ ಕಿಟ್ಟುಗಳನ್ನು ಕೊಡುತ್ತಿಲ್ಲ. ಪ್ರಿನ್ಸಿಪಾಲ್ ವಾರದಲ್ಲಿ ಮೂರು ದಿನ ಹಾಜರಾಗುತ್ತಾರೆ. ವಾರ್ಡನ್ ರಾಯಚೂರಿನಲ್ಲಿ ಮನೆ ಮಾಡಿ ಅವರು ವಾರದಲ್ಲಿ ನಾಲ್ಕು ದಿನ ಬರುತ್ತಾರೆ ಎಂದು ಆರೋಪ ಕೇಳಿ ಬರುತ್ತಿದೆ.
ವಸತಿ ನಿಲಯದಲ್ಲಿ ವೈದ್ಯರಾದ ಡಾ.ಅಂಬಿಕಾ ಮಧುಸೂದನ್ ವಿದ್ಯಾರ್ಥಿಗಳ ಅರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು