9:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವರ್ಗಾವಣೆ ತಡೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ: ಮುಖ್ಯಮಂತ್ರಿ ಯಡಿಯೂರಪ್ಪ ನಕಾರ? 

06/06/2021, 13:39

ಬೆಂಗಳೂರು(reporterkarnataka news): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಹಿಡಿಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಕಾರ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ

ವರ್ಗಾವಣೆ ಆದೇಶದ ಬೆನ್ನಲ್ಲೆ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ‌‌‌ಯಾಗಿ ಮಾತನಾಡಿದ್ದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ‌ ಮಾಡಿದ್ದರು.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷ ಇತ್ತೀಚೆಗೆ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸರಕಾರ ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ‌ ಮಾಡಿದ್ದಾರೆ.

ರೋಹಿಣಿ ಸಿಂಧೂರಿ‌ ಅವರು ಸಿಎಂ ಜತೆ ಸುಮಾರು ಅರ್ಧ ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ,  ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಿಎಂ  ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು