4:45 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕ್ಕೊಳ್ಳಿ : ಡಾ.ಕೃಷ್ಣಾನಂದ ಶೆಟ್ಟಿ

02/10/2021, 11:20

ಕಾರ್ಕಳ(reporterkarnataka.com): ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕೊಳ್ಳುವುದು ಉತ್ತಮ. ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಜೊತೆಗೆ ರೋಗಗಳ ಪತ್ತೆ ಮೊದಲ ಹಂತದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಆಯುಷ್ಯಮಾನ್ ಭಾರತ್ ಯೋಜನೆ ಸಹಕಾರಿಯಾಗಿದೆ. ಇದರ ಪ್ರಯೋಜನ ಸುಲಭವಾಗಿ ಪಡೆಯುವಂತೆ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಕರೆ ನೀಡಿದರು.

ಅವರು ಕಾರ್ಕಳದ ಎಸ್. ವಿ.ಟಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ , ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್  ಕಾರ್ಕಳ ಇದರ ನೇತೃತ್ವದಲ್ಲಿ ನಡೆದ ವಿಶೇಷ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಶಾಲಾ- ಕಾಲೇಜುಗಳಲ್ಲಿ ಇಂತಹ ಹಲವಾರು ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಹೆಚ್ಚಿನ ಪ್ರಮಾಣದ ಚಿಕಿತ್ಸೆ ಅಗತ್ಯವಿರುವ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ನೀಡಿದೆ. ಕಾರ್ಕಳ ಲಯನ್ಸ್ ಕ್ಲಬ್ ಅದ್ಯಕ್ಷ ರಾಜೇಶ್ ಶೆಣೈರವರು ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ ಎಂದರು.

ಕಾರ್ಕಳ ಲಯನ್ಸ್ ಕ್ಲಬ್ ಅದ್ಯಕ್ಷ ರಾಜೇಶ್ ಶೆಣೈ ಮಾತನಾಡುತ್ತಾ, ಹದಿಹರೆಯದ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ದೈಹಿಕ ಬದಲಾವಣೆಗಳು ಸಹಜ. ಯೋಗ , ವ್ಯಾಯಾಮ ,ಧ್ಯಾನದ ಮೂಲಕ ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಹಾಗೂ ಮಾನಸಿಕ ಖಿನ್ನತೆಯನ್ನು ಸರಿಪಡಿಸಬಹುದು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಬಂದಲ್ಲಿ ಲಯನ್ಸ್ ಕ್ಲಬ್ ಸಹಕಾರ ನೀಡಲಿದೆ ಮಾತ್ರವಲ್ಲದೆ  ಕಷ್ಟದಲ್ಲಿರುವ ಜನರ ಮಾನವೀಯ ಸೇವೆಗೆ ಸದಾ ಸಿದ್ದವಿದೆ ಎಂದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ , ಕೋಶಾಧಿಕಾರಿ ಪ್ರಕಾಶ್ ಪಿಂಟೋ  ತಜ್ಞ ವೈದ್ಯರುಗಳಾದ ಡಾ.ನಾಗರಾಜ್ ಡಾ.ಸೌಜನ್ಯ ಡಾ.ಸಹಾನಾ ಕಾರ್ಕಳ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ , ಲಯನ್ಸ್ ಕ್ಲಬ್ ಸದಸ್ಯರಾದ ಪ್ರವೀಣ್ ಕುಮಾರ್ , ರವೀಂದ್ರ ಸಾಲಿಯಾನ್ , ನೇವಿಲ್ ಡಿಸೋಜ , ಪ್ರಕಾಶ್ ರಾವ್ ,ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು