1:13 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು