12:58 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ

11/11/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಘನಘೋರ ಕೃತ್ಯ ಇದಾಗಿದೆ.
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಘಟನೆ ಸಂಬಂಧಿಸಿದಂತೆ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್, ನರ್ಸ್ ಚಂದನಾ ಹಾಗೂ ನರ್ಸ್ ಪ್ರಿಯಕರ ವಿನಯ್ ಎಂದು ತಿಳಿದು ಬಂದಿದೆ.
ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ವಿದೆ.
ತಿಂಗಳುಗಳಿಂದ ನಡೆಯುತ್ತಿರುವ ಕೃತ್ಯ ಇದಾಗಿದೆ ಪೊಲೀಸರ ತನಿಖೆಯಿಂದ ಬಯಲಾಗಿದೆ.
ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ಪುಸಲಾಯಿಸುತ್ತಿದ್ದ.
ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನ ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನ ಅಲ್ಲೇ ಉಳಿಸಿಕೊಳ್ಳುತ್ತಿದ್ದಳು.
ಕಾಫಿ-ಟಿಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು.
ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು