2:04 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌ ಆಯ್ಕೆ: ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಕರೆ

09/05/2025, 22:47

ವೆಟಿಕಾನ್ ಸಿಟಿ(reporterkarnataka.com): ರೋಮನ್‌ ಕ್ಯಾಥೋಲಿಕ್‌ ಚರ್ಚ್‌ನ ನೂತನ ಪೋಪ್‌ ಆಗಿ ಅಮೆರಿಕದ ಅತೀ ವಂದನೀಯ
ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌ ಅವರು ಆಯ್ಕೆಗೊಂಡಿದ್ದಾರೆ.
ಕ್ಯಾಥೋಲಿಕ್ ಚರ್ಚ್‌ನ ಎರಡು ಸಾವಿರ ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ಅಮೆರಿಕದವರು ಈ ಉನ್ನತ ಸ್ಥಾನಕ್ಕೇರಿದ್ದಾರೆ.
ಗುರುವಾರ ಅಂತಿಮ ಆಯ್ಕೆ ನಡೆಯಿತು. 69 ವರ್ಷದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌ ಅವರು ಪೋಪ್ ಆಗಿ ಆಯ್ಕೆಯಾದರು. ಅವರು ‘ಲಿಯೊ 14’ ಎಂಬ ಹೆಸರಿನಿಂದ ಕರೆಸಿಕೊಳ್ಳಲಿದ್ದಾರೆ.
ರಾಬರ್ಟ್ ಫ್ರಾನ್ಸಿಸ್‌ ಅವರು 1955ರ ಸೆಪ್ಟೆಂಬರ್‌ 14ರಂದು ಷಿಕಾಗೊದಲ್ಲಿ ಜನಿಸಿದರು.
2023ರಲ್ಲಿ ಅವರು ವ್ಯಾಟಿಕನ್‌ನ ಕಾರ್ಡಿನಲ್‌ ಆಗಿ ನೇಮಕವಾದರು. ಪೋಪ್​ ಆಗಿ ಆಯ್ಕೆಯಾದ ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು ಎಂದು ಕರೆಕೊಟ್ಟರು. ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ ಎಂದು ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು