10:30 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು