12:32 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ವೀರಕಂಭ ಗ್ರಾಪಂ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ರಾಜೇಶ್ ನಾಯ್ಕ್ ಚಾಲನೆ

14/03/2023, 23:41

ಬಂಟ್ವಾಳ(reporterkarnataka.com):
ಬಂಟ್ವಾಳ ಶಾಸಕನಾಗಿ ತನ್ನ ಕರ್ತವ್ಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ಉದ್ದೇಶಕ್ಕೆ ಜನ್ಮ ತಾಳಿತೋ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.


ಅವರು ವೀರಕಂಭ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 20 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಎರ್ಮೆಮಜಲಿನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ ಅವಧಿಯಲ್ಲಿ ಬಂಟ್ವಾಳದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ದೃಢ ನಿಶ್ಚಯ ಮಾಡಿ ಕ್ಷೇತ್ರದ ಜನತೆಯ ಸಹಕಾರದಿಂದ ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿದ ತೃಪ್ತಿ ಇದೆ. ಕೋವಿಡ್ ನಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ‌ ನೀಡಿದ್ದು, ಆದರೆ ಕಾಂಗ್ರೆಸ್ ಈಗ ಮುಂದೆ ಕೊಡುತ್ತೇನೆ ಎಂದು ಗ್ಯಾರಂಟಿ ನೀಡುತ್ತಿದೆ.
ನಮ್ಮ ಜಿಡಿಪಿ ದರ 6.8 ವೇಗದಲ್ಲಿ ಬೆಳೆಯುತ್ತಿದ್ದು, ಜಗತ್ತಿನಲ್ಲೇ ಇದು ಅತ್ಯಂತ ವೇಗದ ಆರ್ಥಿಕ ಬೆಳೆವಣಿಗೆಯಾಗಿದೆ. 24 ಸಾವಿರಕ್ಕೂ ಅಧಿಕ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಬಂದಿದ್ದು, ೨೪ ಕೋ.ರೂ.ಗಳಿಗೂ ಅಧಿಕ‌ ಮೊತ್ತ ಕಳೆದ ೨ ವರ್ಷಗಳಲ್ಲಿ ಫಸಲ್ ಭೀಮಾ ಯೋಜನೆ ಸೌಲಭ್ಯ ಬಂದಿರುತ್ತದೆ. ಕೃಷಿ ಕಾರ್ಮಿಕ ಮಹಿಳೆಯರಿಗೆ ಮುಂದಿನ ತಿಂಗಳಿನಿಂದ ೧ ಸಾವಿರ ರೂ. ನೆರವು ಲಭಿಸಲಿದೆ. ನಾವು ನೀಡಿರುವ ಎಲ್ಲಾ ಯೋಜನೆಗಳನ್ನು ಕಾಂಗ್ರೆಸ್ ಮುಂದೆ ಕೊಡುತ್ತೇವೆ ಎಂದು ಗ್ಯಾರಂಟಿ ಭರವಸೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನನ್ನು ಕೂಡ ಬಿಜೆಪಿ ನೀಡಿದ ಭರವಸೆಯಂತೆ ಈಡೇರಿಸಿದ್ದು, ರಾಜ್ಯದಲ್ಲಿ ಸರಕಾರ ಇದ್ದ ಕಾರಣದಿಂದಲೇ ಈ ಎಲ್ಲಾ ಕಾರ್ಯಗಳನ್ನು ಅನುಷ್ಠಾನ ಮಾಡಲು ಸಾಧ್ಯವಾಗಿದೆ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನು ಬೆಳೆಯಲು ಸಾಧ್ಯವಿದ್ದು, ಸಾಧಕನನ್ನೇ ಹುಡುಕಿ ಪ್ರಶಸ್ತಿ ನೀಡುವ ಕಾರ್ಯವನ್ನು ಬಿಜೆಪಿ ಮಾಡಿದೆ ಎಂದರು.‌
ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಜಯಪ್ರಸಾದ್ ಶೆಟ್ಟಿ, ಸಂದೀಪ್, ಜಯಂತಿ ಜನಾರ್ದನ, ಮೀನಾಕ್ಷಿ, ಉಮಾವತಿ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಶ್ವನಾಥ್ ಎಂ, ಬಂಟ್ವಾಳ ಬಿಜೆಪಿ ಮಾಧ್ಯಮ ಪ್ರಮುಖ್ ದೇವಿಪ್ರಸಾದ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ಪ್ರಮುಖರಾದ ಚಂದ್ರಹಾಸ ಶೆಟ್ಟಿ, ರಾಮಚಂದ್ರ ಪೂಜಾರಿ ಪಾದೆಗುತ್ತು, ಸಂದೀಪ್ ಶೆಟ್ಟಿ ಅರೆಬೆಟ್ಟು ಉಪಸ್ಥಿತರಿದ್ದರು.
ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ ಬಾಯಿಲ ಸ್ವಾಗತಿಸಿದರು. ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು