12:31 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಕ್ರಮ ಗೋ ಸಾಗಾಟ ವೇಳೆ ಕೆಟ್ಟು ಹೋದ ವಾಹನ: ಜಾನುವಾರುಗಳ ರಕ್ಷಣೆ; ಇಬ್ಬರು ಆರೋಪಿಗಳ ಬಂಧನ

02/12/2025, 12:16

ಪುತ್ತೂರು(reporterkarnataka.com): ಕದ್ದ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ರಸ್ತೆ ಮಧ್ಯೆ ಕೆಟ್ಟು ಹೋಗಿರುವುದರಿಂದ ಜಾನುವಾರುಗಳು ಬಚಾವ್ ಆಗಿರುವ ಘಟನೆ ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್‌ ಲತೀಫ್ (25) ಎಂದು ಗುರುತಿಸಲಾಗಿದೆ.
ಪುತ್ತೂರು ಪಾಣಾಜೆ ನಿವಾಸಿ ಪ್ರೇಮ್ರಾಜ್ ಎಂಬವರು ನೀಡಿದ ದೂರಿನಂತೆ ದಿನಾಂಕ: 29-11-2025 ರಂದು
ಬೆಳಗ್ಗೆ ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ, ವಾಹನ ರಸ್ತೆಯಲ್ಲಿ ಕೆಟ್ಟುಹೋಗಿರುವುದರಿಂದ, ವಾಹನದಲ್ಲಿದ್ದ ಗೋವುಗಳನ್ನು ಪುತ್ತೂರು, ನರಿಮೊಗರು ಎಂಬಲ್ಲಿ ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದು, ಅವುಗಳನ್ನು ಪಿರ್ಯಾದುದಾರರು ಸ್ಥಳೀಯರ ಸಹಕಾರದಿಂದ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಈ ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯವಿದ್ದು, ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ದೂರಿನಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2025, ಕಲಂ: 4, 5 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ಮತ್ತು ಕಲಂ: 303(1) BNS 2023 ಮತ್ತು 106 BNSS -2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ನಡೆಸಲಾಗಿ, ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್‌ ಲತೀಫ್ (25) ಎಂಬವರುಗಳು ಕೆಎ 52 4889 ನೋಂದಣಿಯ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ದುರಸ್ತಿಗೀಡಾದ್ದರಿಂದ, ಆರೋಪಿಗಳು ಈ ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿರುವುದು ತಿಳಿದುಬಂದಿದೆ. ಪ್ರಕರಣದ ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು