10:49 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವೆನ್‍ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆ  

21/07/2022, 22:02

ಮಂಗಳೂರು(reporterkarnataka.com):ಕಾರ್ಪೊರೇಟ್ ಸಾಮಾಜಿಕ ಜವಬ್ದಾರಿ ಚಟುವಟಿಕೆಗಳಡಿ 15 ಲಕ್ಷ ರೂ.ಗಳ ಆಂಬುಲೆನ್ಸ್ ಅನ್ನು ನಗರದ ವೆನ್‍ಲಾಕ್ ಆಸ್ಪತ್ರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಜು.21ರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೂಲಕ ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ ವೆನ್‍ಲಾಕ್ ಸರ್ಜನ್ ಸದಾಶಿವ ಶಾನುಭೋಗ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಅಶೊಕ್, ಡಾ.ಜಗದೀಶ್, ಎಸ್.ಬಿ.ಐ ಮಹಾ ಪ್ರಬಂಧಕ ನಂದಕಿಶೋರ್, ಪ್ರಬಂಧಕ ಅನುರಾಗ್ ಜೋಷಿ, ಉಪ ಪ್ರಧಾನ ವ್ಯವಸ್ಥಾಪಕ ಜೋಬಿ ಜೋಸೆಫ್, ಪ್ರಾದೇಶಿಕ ವ್ಯವಸ್ಥಾಪಕ ಉದಯ್ ಕುಮಾರ್, ಉಪ ಪ್ರಧಾನ ವ್ಯವಸ್ಥಾಪಕಿ ಡೇಸಿ ಖಜೂರ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು. 

ಈ ಸಂದರ್ಭದಲ್ಲಿ ಆಂಬುಲೆನ್ಸ್ ಅನ್ನು ಜಾಗರೂಕತೆಯಿಂದ ಚಲಾಯಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಚಾಲಕನಿಗೆ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು