8:49 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆ

29/11/2021, 15:53

ಮೂಡಬಿದಿರೆ(reporterkarnataka.com):  ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆಯನ್ನು ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. 

ನವೆಂಬರ್ ತಿಂಗಳ 4ನೇ ಭಾನುವಾರವನ್ನು ಎನ್ ಸಿ ಸಿ ದಿನವನ್ನಾಗಿ ಪ್ರತಿವರ್ಷವೂ ಆಚರಿಸಲಾಗುತ್ತಿದ್ದು, 73ನೇ ವರ್ಷದ ಎನ್ ಸಿ ಸಿ ದಿನಾಚರಣೆಯನ್ನು ಈ ವರ್ಷ ನವೆಂಬರ್ 28ರಂದು ದೇಶದಲ್ಲೆಲ್ಲೆಡೆ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ್ ಡಾ ರಾಧಾಕೃಷ್ಣ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಗೆ ದಿನಬಳಕೆಯ ವಸ್ತುಗಳನ್ನು ನೀಡುವ ಮುಖಾಂತರ ಹಾಗೂ ಶಾಲೆಯಲ್ಲಿ ಎನ್ ಸಿ ಸಿ ಕೆಡೆಟ್ ಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡುವ ಮೂಲಕ ಎನ್ ಸಿ ಸಿ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕ್ರಿಸ್ತರಾಜ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಲೆಟ್ ಸ್ವಾಗತಿಸಿ ಶಾಲೆಯ ಶಿಕ್ಷಕಿ ಶಾಂತ ಮಾರ್ಟಿಸ್ ವಂದಿಸಿದರು. ಕೆಡೆಟ್ ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ ಸಿ ಸಿ ಘಟಕದ ಅಧಿಕಾರಿ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು