ಇತ್ತೀಚಿನ ಸುದ್ದಿ
ವೇಣೂರು: ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ; ನಿವೃತ್ತ ಶಿಕ್ಷಕಿಗೆ ಸನ್ಮಾನ
01/09/2024, 16:49
ಮಂಗಳೂರು(reporterkarnataka.com): ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ಭಾನುವಾರ ನಡೆಯಿತು.
ಸಮಾರಂಭವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿದರು. ಡಾ. ರಾಜೇಶ್ ಬಾರ್ದಿಲ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳ್ತಂಗಡಿ ಗುರುದೇವ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಕೃಷ್ಣಪ್ಪ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ವೇಣೂರು ಮಜಲಿನ ಎಲಿಜಾ ಸಿಕ್ವೇರಾ ಅವರನ್ನು ಸನ್ಮಾನಿಸಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ತೋಮಸ್ ನೊರೊನ್ಹಾ ಮುಂತಾದವರು ಉಪಸ್ಥಿತರಿದ್ದರು.