6:18 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು