7:16 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು